ಚಿಕ್ಕೋಡಿ : ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965 ರಲ್ಲಿ ಅಂದಿನ ಪ್ರಧಾನಿ ನೆಹರು ಅವರು ಜಾರಿಗೆ ತಂದಿದ್ದರು. ಆದರೀಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ-ಬಣ್ಣ ಬಳೆದು ಅಲಂಕರಿಸಲು ಹೊರಟಿದೆ. ದೇಶದ ಜನರು ಬಣ್ಣದ ಮಾತಿಗೆ ಮರುಳಾಗದೆ ಮತ್ತೆ ವಸ್ತುಸ್ಥಿತಿಗೆ ಬರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೀಗ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾಯ್ದೆ ಹೊಸದೇನಲ್ಲ. ಅದಕ್ಕೆ ಜನರು ಮರಳಾಗಬಾರದು ಎಂದರು.