ಬೆಳಗಾವಿ: ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ವೇಳೆ ಖಾಸಗಿ ಸುದ್ದಿ ವಾಹಿನಿ ಪ್ರತಿನಿಧಿಗಳ ಮೇಲಿನ ಹಲ್ಲೆಯನ್ನು ಬೆಳಗಾವಿ ಪತ್ರಕರ್ತರ ಸಂಘ ಖಂಡಿಸಿದೆ.
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ: ಬೆಳಗಾವಿ ಪತ್ರಕರ್ತರ ಸಂಘದಿಂದ ಸಿಎಂಗೆ ಮನವಿ - ಬೆಂಗಳೂರಿನ ಕೆಜಿ ಹಳ್ಳಿ ಘಟನೆ
ಖಾಸಗಿ ಸುದ್ದಿ ವಾಹಿನಿ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ವಿರೋಧ ವ್ಯಕ್ತಪಡಿಸಿ ಬೆಳಗಾವಿ ಪತ್ರಕರ್ತರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಬೆಳಗಾವಿ ಪತ್ರಕರ್ತರ ಸಂಘ
ಸಂಘದ ಅಧ್ಯಕ್ಷ ಶ್ರೀಶೈಲ ಮಠದ ನೇತೃತ್ವದಲ್ಲಿ ಡಿಸಿ ಕಚೇರಿಗೆ ತೆರಳಿದ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ಮತ್ತು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ ವೇಳೆ ಆಗ್ರಹಿಸಲಾಯಿತು.
ಈ ವೇಳೆ ಸಂಘದ ಪದಾಧಿಕಾರಿಗಳಾದ ಕುಂತಿನಾಥ ಕಲಮನಿ, ಸುರೇಶ ನೇರ್ಲಿ, ಮಂಜುನಾಥ ಕೋಳಿಗುಡ್ಡ, ರಾಜಶೇಖರ ಹಿರೇಮಠ, ಜಗದೀಶ್ ವಿರಕ್ತಮಠ ಮತ್ತಿತರರು ಹಾಜರಿದ್ದರು.