ಕರ್ನಾಟಕ

karnataka

ETV Bharat / state

ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೊರೆ ಹೊತ್ತ ಸತೀಶ್ ಜಾರಕಿಹೊಳಿ - election campaign 2020

ಪದವೀಧರ ಚುನಾವಣಾ ಪ್ರಚಾರ ಬಿರುಸಿನಿಂದ ನಡೆದಿದ್ದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್​ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ತೆರಳುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

Appointment of in-charge for election campaign
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

By

Published : Oct 19, 2020, 9:04 PM IST

ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆಗೆ ಉಸ್ತುವಾರಿಯನ್ನಾಗಿ ಚುನಾವಣೆ ಪ್ರಚಾರಕ್ಕೆ ನೇಮಕ ಮಾಡಿ ಕಾಂಗ್ರೆಸ್​ ಪಕ್ಷ ಸೂಚನೆ ನೀಡಿದೆ.

ಪಕ್ಷದ ಆದೇಶ ಪ್ರತಿ

ರಾಜ್ಯದಲ್ಲಿ ಪದವೀಧರ ಚುನಾವಣಾ ಪ್ರಚಾರ ಬಿರುಸಿನಿಂದ ನಡೆದಿದ್ದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್​ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆಗೆ ಉಸ್ತುವಾರಿಯನ್ನಾಗಿ ಚುನಾವಣೆ ಪ್ರಚಾರಕ್ಕೆ ನೇಮಕ ಮಾಡಿದ್ದಾರೆ. ಜಾರಕಿಹೊಳಿ ಸೇರಿದಂತೆ ವಿವಿಧ ನಾಕರನ್ನು ಚುನಾವಣಾ ಪ್ರಚಾರಕ್ಕೆ ತೆರಳುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ABOUT THE AUTHOR

...view details