ಬೆಳಗಾವಿ :ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ನೇಮಕ ಆದೇಶವನ್ನು ತಕ್ಷಣವೇ ರದ್ಧುಪಡಿಸುವಂತೆ ಆಗ್ರಹಿಸಿ ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನರು, ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಒಕ್ಕೂಟದ ರಾಜ್ಯಾಧ್ಯಕ್ಷ ಫಕೀರಗೌಡ ಪಾಟೀಲ್ ಮಾತನಾಡಿ, ಕಳೆದ 13 ವರ್ಷಗಳಿಂದ ಅತ್ಯಂತ ಕಡಿಮೆ ಗೌರವಧನದಲ್ಲಿ ಇಲಾಖೆ ಎಲ್ಲ ಕೆಲಸಗಳನ್ನು ಮಾಡುತ್ತಾ ಇತರ ಇಲಾಖೆಯಲ್ಲಿ ಸಿಗುವಂತಹ ವಿಕಲಚೇತನರ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಿಗುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ.