ಕರ್ನಾಟಕ

karnataka

ETV Bharat / state

ಫೆ. 4ರಿಂದ ಸೇನಾ ನೇಮಕಾತಿ ರ‍್ಯಾಲಿ: ಅಗತ್ಯ ಸೌಲಭ್ಯ ಒದಗಿಸಲು ಬೆಳಗಾವಿ ಡಿಸಿ ಸೂಚನೆ - ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನ

ಮಹಾನಗರ ಪಾಲಿಕೆ ವತಿಯಿಂದ ಮೊಬೈಲ್ ಟಾಯ್ಲೆಟ್ ನೀಡಬೇಕು ಹಾಗೂ ರ‍್ಯಾಲಿಯಲ್ಲಿ ಪ್ರತಿ ದಿನ 5000 ಅಭ್ಯರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಕುಡಿಯುವ ನೀರಿನ ಟ್ಯಾಂಕ್ ಒದಗಿಸುವುದರ ಜೊತೆಗೆ ಸ್ವಚ್ಛತೆಯ ಜವಾಬ್ದಾರಿಯನ್ನು ವಹಿಕೊಳ್ಳಬೇಕು ಎಂದು ತಿಳಿಸಿದರು.

Army recruitment rally in belagavi news
ಅಗತ್ಯ ಸೌಲಭ್ಯ ಒದಗಿಸಲು ಬೆಳಗಾವಿ ಡಿಸಿ ಸೂಚನೆ

By

Published : Jan 31, 2021, 8:58 PM IST

ಬೆಳಗಾವಿ:ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಫೆಬ್ರವರಿ 4ರಿಂದ 15ರವರೆಗೆ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ. ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳ ಆರೋಗ್ಯ ತಪಾಸಣೆ, ಭದ್ರತೆ, ವಸತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಅಗತ್ಯ ಸೌಲಭ್ಯ ಒದಗಿಸಲು ಬೆಳಗಾವಿ ಡಿಸಿ ಸೂಚನೆ

ಓದಿ: ರಾಜ್ಯದಲ್ಲಿಂದು 522 ಮಂದಿಗೆ ಕೊರೊನಾ ದೃಢ: 4 ಮಂದಿ ಬಲಿ‌

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ಸೇನಾ ನೇಮಕಾತಿ ರ‍್ಯಾಲಿಗೆ ಬೇಕಾದ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಅವಶ್ಯಕ ಸೌಕರ್ಯ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದ ಒಳಗಡೆ ಹಾಗೂ ಗೇಟ್ ಬಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಭದ್ರತೆ ಒದಗಿಸಲು ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಥರ್ಮಲ್ ಸ್ಕ್ಯಾನರ್, ಮಾಸ್ಕ್, ಸ್ಯಾನಿಟೈಸರ್ ಹಾಗೂ ಆ್ಯಂಬ್ಯುಲೆನ್ಸ್ ಸೌಲಭ್ಯ ನೀಡಬೇಕು ಮತ್ತು ರ‍್ಯಾಲಿ ನಡೆಯುವ ದಿನಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಿರಬೇಕು ಎಂದು ಹೇಳಿದರು.

ಅಗತ್ಯ ಸೌಲಭ್ಯ ಒದಗಿಸಲು ಬೆಳಗಾವಿ ಡಿಸಿ ಸೂಚನೆ

ಬಸ್ ನಿಲ್ದಾಣ ಮತ್ತು ರೈಲ್ವೆ ಸ್ಟೇಷನ್ ಮೂಲಕ ಬರುವ ಅಭ್ಯರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಕೆಎಸ್​​ಆರ್​ಟಿಸಿ ಅಧಿಕಾರಿಗಳಿಗೆ ತಿಳಿಸಿದರು. ಅಭ್ಯರ್ಥಿಗಳು ಉಳಿದುಕೊಳ್ಳಲು ಪೀರನವಾಡಿಯಲ್ಲಿ ಕಲ್ಯಾಣ ಮಂಟಪ ವ್ಯವಸ್ಥೆ ಮಾಡಲು ಬೆಳಗಾವಿ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಸೂಚಿಸಿದರು.

ಮಹಾನಗರ ಪಾಲಿಕೆ ವತಿಯಿಂದ ಮೊಬೈಲ್ ಟಾಯ್ಲೆಟ್ ನೀಡಬೇಕು ಹಾಗೂ ರ‍್ಯಾಲಿಯಲ್ಲಿ ಪ್ರತಿ ದಿನ 5000 ಅಭ್ಯರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಕುಡಿಯುವ ನೀರಿನ ಟ್ಯಾಂಕ್ ಒದಗಿಸುವುದರ ಜೊತೆಗೆ ಸ್ವಚ್ಛತೆಯ ಜವಾಬ್ದಾರಿಯನ್ನು ವಹಿಕೊಳ್ಳಬೇಕು ಎಂದು ತಿಳಿಸಿದರು.

ಒಂದು ಸುತ್ತಿನ ರ‍್ಯಾಲಿಯಲ್ಲಿ 250 ಅಭ್ಯರ್ಥಿಗಳು ಭಾಗವಹಿಸಲಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಭ್ಯರ್ಥಿಗಳ ಪ್ರವೇಶ ಪತ್ರ ಹಾಗೂ ದಾಖಲಾತಿಗಳ ಪರಿಶೀಲನೆ ನಡೆಸಬೇಕು. ವಿದ್ಯುತ್ ಸರಬರಾಜು ಕಡಿತ ಆಗದಂತೆ ನಿರಂತರ ವಿದ್ಯುತ್ ಪೂರೈಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ರ‍್ಯಾಲಿ ನಡೆಯುವ ದಿನದ 24 ಗಂಟೆಗ ಕಾಲ ತುರ್ತು ಸೇವೆ ನೀಡಲು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ತಿಳಿಸಿದರು. ಆಸಕ್ತ ಎನ್​​ಜಿಒ ವತಿಯಿಂದ ಅಭ್ಯರ್ಥಿಗಳಿಗೆ ಫುಡ್ ಪ್ಯಾಕೆಟ್ ನೀಡಲು ಮನವಿ ಮಾಡುವುದಾಗಿ ಅಧಿಕಾರಿಗಳಿಗೆ ಹೇಳಿದರು.

ABOUT THE AUTHOR

...view details