ಕರ್ನಾಟಕ

karnataka

By

Published : Oct 22, 2021, 12:28 PM IST

ETV Bharat / state

ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ: ಅಶೋಕ್​ ಪೂಜಾರಿ

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸಿದ್ಧನಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾಗಿದ್ದೇನೆ ಎಂದು ಅಶೋಕ್​ ಪೂಜಾರಿ ತಿಳಿಸಿದರು.

Ashok Poojary
ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್​ ಪೂಜಾರಿ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೆಲುವಿಗೆ ಕಡಿವಾಣ ಹಾಕಲು ಕಾಂಗ್ರೆಸ್ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ.

ಹೌದು, ರಮೇಶ್ ಜಾರಕಿಹೊಳಿ‌ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್​ ಪೂಜಾರಿಯವರನ್ನು ಕಣಕ್ಕಿಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ‌ನಾಯಕ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಮೂಲಕ ಕೈ ನಾಯಕರು ಅಶೋಕ್​ ಪೂಜಾರಿ ಅವರನ್ನು ಸಂಪರ್ಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಶೋಕ್​ ಪೂಜಾರಿ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬದ್ಧನಾಗಿದ್ದೇನೆ. ನಾನು ಸಹ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾಗಿದ್ದೇನೆ. ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳುತ್ತೇನೆ ಎಂದು ತಿಳಿಸಿದ್ದೇನೆ. ಸತೀಶ್ ಜಾರಕಿಹೊಳಿಗೆ ದಿನಾಂಕ ನಿಗದಿಪಡಿಸಲು ಹೇಳಿರುವುದಾಗಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್​ ಪೂಜಾರಿ

ಗೋಕಾಕ್‌ನಲ್ಲಿ ಬದಲಾವಣೆ, ಹೋರಾಟ ಯಶಸ್ವಿಯಾಗಬೇಕಾದರೆ ಸಂದರ್ಭಾನುಸಾರ ರಾಜಕಾರಣ ಮಾಡುವ ಅನಿವಾರ್ಯತೆ ಇದೆ. ಗೋಕಾಕ್ ತಾಲೂಕಿನಲ್ಲಿ ಬದಲಾವಣೆ ಅಗತ್ಯವಿದೆ. ಎಲ್ಲರೂ ನನ್ನ ಜೊತೆ ಕೈಜೋಡಿಸಬೇಕಿದೆ. ಕಾಂಗ್ರೆಸ್ ಜೊತೆ ಮತದಾರರು ಕೈ ಜೋಡಿಸಿದ್ರೆ ಗೋಕಾಕ್‌ನಲ್ಲಿ ಬದಲಾವಣೆ ಆಗುತ್ತದೆ ಎಂದರು.

ABOUT THE AUTHOR

...view details