ಬೆಳಗಾವಿ: ಮಹಾಮಾರಿ ಕೊರೊನಾ ಸೋಂಕಿಗೆ ಘಟಪ್ರಭಾ ಪೊಲೀಸ್ ಠಾಣೆಯ ಎಎಸ್ಐ ಆನಂದ ಗುಡೇನ್ನವರ್(51) ಬಲಿಯಾಗಿದ್ದಾರೆ.
ಘಟಪ್ರಭಾ ಠಾಣೆಯ ಎಎಸ್ಐ ಆನಂದ ಗುಡೇನ್ನವರ್ ಕೋವಿಡ್‌ಗೆ ಬಲಿ
ಗೋಕಾಕ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಎಸ್ಐ ಆನಂದ ಗುಡೇನ್ನವರ್ ಅವರಿಗೆ ಕಳೆದ 10 ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಎಎಸ್ಐ ಆನಂದ ಗುಡೇನ್ನವರ್ ನಿಧನ
ಗೋಕಾಕ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಎಸ್ಐ ಆನಂದ ಗುಡೇನ್ನವರ್ ಅವರಿಗೆ ಕಳೆದ 10 ದಿನಗಳ ಹಿಂದೆ ಕೋವಿಡ್ ದೃಢಪಟ್ಟಿತ್ತು. ಬಳಿಕ ಗೋಕಾಕ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಅವರು ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.
ಇದನ್ನೂ ಓದಿ:ಠಾಣೆಗೆ ಕರೆದು ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್ಐ ವಿರುದ್ಧ ಎಫ್ಐಆರ್
Last Updated : May 23, 2021, 10:25 AM IST