ಅಥಣಿ: ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆದಿದೆ.
ಅಥಣಿಯಲ್ಲಿ ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ! - athani Assault news
ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಅಥಣಿಯ ಬಸವೇಶ್ವರ ವೃತ್ತದ ಬಳಿ ನಡೆದಿದೆ.

ಸ್ ಚಾಲಕನ ಮೇಲೆ ಹಲ್ಲೆ
ಅಥಣಿಯಲ್ಲಿ ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ
ರೇವಣ್ಣ ಚಿನ್ನವರ ಹಲ್ಲೆಗೊಳಗಾಗಿರುವ ಬಸ್ ಚಾಲಕ. ಮುದ್ದೇಬಿಹಾಳದಿಂದ ಅಥಣಿ ಮಾರ್ಗವಾಗಿ ಮಹಾರಾಷ್ಟ್ರದ ಮೀರಜ್ಗೆ ಸಂಚರಿಸುವ ವೇಳೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕೇವಲ ಹಾರ್ನ್ ಮಾಡಿದ್ದಕ್ಕೆ ಸಿಟ್ಟಿಗೆದ್ದ ಬೈಕ್ ಚಾಲಕ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಬಸ್ ಚಾಲಕ ಆರೋಪಿಸಿದ್ದಾರೆ.
ಹಲ್ಲೆಯಿಂದ ಬಸ್ ಚಾಲಕನಿಗೆ ಮೂಗಿಗೆ ಗಾಯವಾಗಿ ರಕ್ತಸ್ರಾವವಾಗಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂಬುದು ತಿಳಿದುಬಂದಿಲ್ಲ. ಈ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.