ಚಿಕ್ಕೋಡಿ:ಕೇವಲ ಬಾಗಲಕೋಟೆ, ವಿಜಯಪುರ ಬರಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿ ವಿಜಯಪುರದಿಂದ ಬೆಂಗಳೂರಿನತ್ತ ಸಿಎಂ ಬಿ ಎಸ್ ಯಡಿಯೂರಪ್ಪ ಮುಖಮಾಡಿದ್ದರಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವತ್ತು ಸಿಎಂ ಸತ್ತಿ ಗ್ರಾಮದಲ್ಲೂ ಪ್ರವಾಹ ಪರಿಸ್ಥಿತಿ ಪರಿಶೀಲಿಸಬೇಕಿತ್ತು. ಆದರೆ, ಅರ್ಧಕ್ಕೆ ವಾಪಸ್ ಬೆಂಗಳೂರಿಗೆ ತೆರಳಿದ್ದರಿಂದಾಗಿ ಸತ್ತಿ ಗ್ರಾಮದ ಜನ ಸಿಎಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಹವಾಮಾನ ವೈಪರೀತ್ಯ ಹಿನ್ನೆಲೆ.. ಕೊನೆ ಕ್ಷಣದಲ್ಲಿ ಸಿಎಂ ಯಡಿಯೂರಪ್ಪ ಅಥಣಿ ಪ್ರವಾಸ ರದ್ದು..
ಬಾಗಲಕೋಟೆ, ವಿಜಯಪುರ ಬರಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿ ವಿಜಯಪುರದಿಂದ ಬೆಂಗಳೂರಿನತ್ತ ಬಿ ಎಸ್ ಯಡಿಯೂರಪ್ಪ ಮುಖಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೆ ಆಗಮಿಸಲಿಲ್ಲವೆಂದು ಗ್ರಾಮಸ್ಥರಿಂದ ಸಿಎಂ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.
ಕೊನೆ ಕ್ಷಣದಲ್ಲಿ ರದ್ದಾಯ್ತು ಮಖ್ಯಮಂತ್ರಿ ಬಿ.ಎಸ್ ವೈ ಅಥಣಿ ಪ್ರವಾಸ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ, ರಡೆರಟ್ಟಿ ಗ್ರಾಮಗಳಿಗೆ ಭೇಟಿ ನೀಡಬೇಕಿದ್ದ ಯಡಿಯೂರಪ್ಪ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದರಿಂದಾಗಿ ಪ್ರವಾಸ ರದ್ದು ಮಾಡಿದ್ದಾರೆ. ಅತಿ ಹೆಚ್ಚು ಪ್ರವಾಹ ಪೀಡಿತ ಜಿಲ್ಲೆಯಾದ ಬೆಳಗಾವಿಗೆ ಪ್ರವಾಸ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.