ಅಥಣಿ(ಬೆಳಗಾವಿ): ಎಂಟು ವರ್ಷದ ಮಗಳ ಜೊತೆ ತಾಯಿಯು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವಿತಾ ಮದಗೋಂಡ ಬೆಳಗಲಿ (24) ಹಾಗೂ ಅವರ 8 ವರ್ಷದ ಮಗಳು ಮೃತರು ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಅಥಣಿ: ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ತಾಯಿಯು ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
ಕಳೆದ ಎರಡು ದಿನದ ಹಿಂದೆ ಮೃತ ಸವಿತಾಗೆ ತವರು ಮನೆಯವರು ಬುದ್ಧಿವಾದ ಹೇಳಿದ್ದರು. ಈ ಬುದ್ಧಿವಾದದ ಮಾತುಗಳಿಂದಲೇ ಮನನೊಂದು ಮಗಳ ಜೊತೆಗೆ ಸವಿತಾ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧ: ಶಿವಮೊಗ್ಗದಲ್ಲಿ ವಿಷ ಸೇವಿಸಿದ ಪ್ರೇಮಿಗಳು