ಕರ್ನಾಟಕ

karnataka

ETV Bharat / state

ಹಥ್ರಾಸ್ ಪ್ರಕರಣ ಖಂಡಿಸಿ ಅಥಣಿಯಲ್ಲಿ ದಸಂಸ ಪ್ರತಿಭಟನೆ - Athani in Belgaum district

ಉತ್ತರ ಪ್ರದೇಶದ ಹಥ್ರಾಸ್ ಗ್ರಾಮದಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು. ಈ ವೇಳೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಾಚಾರಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

Athani Dalit sangharsh Committee Protest Against Hathras Case
ಹಥ್ರಾಸ್ ಪ್ರಕರಣ ಖಂಡಿಸಿ ಅಥಣಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

By

Published : Oct 9, 2020, 5:16 PM IST

ಅಥಣಿ(ಬೆಳಗಾವಿ):ಉತ್ತರ ಪ್ರದೇಶದ ಹಥ್ರಾಸ್​​ನಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಅಥಣಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅತ್ಯಾಚಾರಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು. ಜೊತೆಗೆ, ಅಥಣಿ ತಹಶೀಲ್ದಾರ್​ ದುಂಡಪ್ಪ ಕೋಮಾರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ, ದಲಿತ ಸಂಘರ್ಷ ಸಮಿತಿ ಮುಖಂಡ ಶಶಿ ಸಾಳ್ವೆ ಮಾತನಾಡಿ, ಉತ್ತರಪ್ರದೇಶ ಸರ್ಕಾರ ನೈತಿಕ ಹೊಣೆ ಹೊತ್ತು ಯೋಗಿ ಆದಿತ್ಯನಾಥ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ABOUT THE AUTHOR

...view details