ಅಥಣಿ :ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ಸರ್ಕಾರದ ನಿರ್ದೇಶನದಂತೆ ಪ್ರತಿ ಭಾನುವಾರ ಲಾಕ್‌ಡೌನ್ ನಿಯಮ ಜಾರಿಯಾಗಿದ್ದರಿಂದ ಪಟ್ಟಣದಲ್ಲಿ ಸರಕು ವಾಹನ ಸಂಚಾರ ಹೊರತುಪಡಿಸಿ. ಅಂಗಡಿ-ಮುಂಗಟ್ಟುಗಳು, ವ್ಯಾಪಾರ, ವಹಿವಾಟ ಬಂದ್ ಮಾಡಲಾಗಿದೆ.
ತಾಲೂಕಿನಲ್ಲಿ ದಿನೇದಿನೆ ಹೆಚ್ಚುತ್ತಿರುವ ಸೋಂಕಿತ ಪ್ರಕರಣ: ಶನಿವಾರ ಒಂದೇ ದಿನ 7 ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಮಾಸ್ಕ್ ಧರಿಸದೇ ಹೊರ ಬಂದವರಿಗೆ ದಂಡ ಹಾಕುತ್ತಿದ್ದಾರೆ.