ಕರ್ತವ್ಯದ ವೇಳೆ ಹೃದಯಾಘಾತ; ಕಂದಾಯ ಇಲಾಖೆಯ ಶಿರಸ್ತೇದಾರ್ ನಿಧನ - ಅಥಣಿ ತಹಶೀಲ್ದಾರ್ ಕಚೇರಿ
ಅಥಣಿಯ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶಿರಸ್ತೇದಾರ್ ಹೃದಯಾಘಾತದಿಂದ ಮರಣ ಹೊಂದಿರುವ ಘಟನೆ ಸಂಭವಿಸಿದೆ.
![ಕರ್ತವ್ಯದ ವೇಳೆ ಹೃದಯಾಘಾತ; ಕಂದಾಯ ಇಲಾಖೆಯ ಶಿರಸ್ತೇದಾರ್ ನಿಧನ S.S Halloli](https://etvbharatimages.akamaized.net/etvbharat/prod-images/768-512-05:31:36:1596801696-kn-ath-04-07-on-duty-officer-death-av-kac10006-07082020172439-0708f-1596801279-506.jpg)
ಅಥಣಿ: ಕಂದಾಯ ಇಲಾಖೆಯ ಶಿರಸ್ತೇದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಓರ್ವರು ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಎಸ್. ಎಸ್ ಹಳ್ಳೋಳಿ (52) ಎಂಬುವರು ಅಥಣಿ ತಹಶೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆಯ ಶಿರಸ್ತೇದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನದ ಸಮಯದಲ್ಲಿ ಮೂತ್ರ ವಿಸರ್ಜನೆಗೆಂದು ಹೋದ ವೇಳೆ ಹೃದಯಾಘಾತ ಸಂಭವಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ಗಮನಿಸಿ ಅವರನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಎಸ್. ಎಸ್ ಹಳ್ಳೋಳಿ ಮೃತಪಟ್ಟಿದ್ದಾರೆ.
ಮೃತರ ಆತ್ಮಕ್ಕೆ ಆ ಭಗವಂತನು ಶಾಂತಿ ನೀಡಲಿ ಎಂದು ಅಥಣಿ ತಹಶೀಲ್ದಾರ್ ದುಂಡಪ್ಪ ಕೊಮಾರ ಸೇರಿದಂತೆ ಅವರ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.