ಅಥಣಿ :ತಾಲೂಕಿನ ಬಳ್ಳಿಗೆರಿ ಗ್ರಾಮದ ಯೋಧ ಶಂಕರ ಮಹಾಲಿಂಗಪ್ಪ ಪಾಟೀಲ (32) ಅಪಘಾತದಲ್ಲಿ ಸಾವನ್ನಪ್ಪಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಶುಕ್ರವಾರ ರಾತ್ರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಕ್ರಾಸ್ ಹತ್ತಿರ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದರು. ಇಂದು ಅಥಣಿ ತಾಲೂಕಿನ ಬಳ್ಳಿಗೆರಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತರಲಾಯಿತು.
ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧನ ಅಂತ್ಯಸಂಸ್ಕಾರ.. ಗ್ರಾಮದ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗಾವಿ ಜಿಲ್ಲಾಡಳಿತ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧನ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಕಳೆದ 12 ದಿನದ ಹಿಂದೆ ರಜೆ ತೆಗೆದುಕೊಂಡು ಸ್ವಗ್ರಾಮಕ್ಕೆ ಆಗಮಿಸಿದ್ದ ಯೋಧ ಸಂಬಂಧಿಕರ ಮನೆಗೆ ತೆರಳಿದ್ದರು. ವಾಪಸ್ ಬರುವಾಗ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಕ್ರಾಸ್ ಹತ್ತಿರ ಜೆಸಿಬಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯೋಧ ಮೃತಪಟ್ಟಿದ್ದಾರೆ.
ಊರಿಗೆ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬಳ್ಳಿಗೆರಿ ಗ್ರಾಮದಲ್ಲಿ ದುಃಖ ಮಡುಗಟ್ಟಿತ್ತು.