ಬೆಳಗಾವಿ: 500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ, ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾದ ಪಟ್ಟಣದ ಬಾರ್ನಲ್ಲಿ ಕ್ಯಾಷಿಯರ್ಗೆ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇದ್ದು, ಇದಲ್ಲದೇ ಫುಲ್ ಆಫ್ ಫನ್ ಅಂತಾ ಇತ್ತು. ಹಾಗಾಗಿ ಅನುಮಾನ ಬಂದ ಹಿನ್ನೆಲೆ ಪೊಲೀಸರಿಗೆ ಬಾರ್ ಮಾಲೀಕರು ದೂರು ನೀಡಿದ್ದರು.