ಅಥಣಿ :ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಲಾಕ್ ಡೌನ ಹಿನ್ನೆಲೆಯಲ್ಲಿ, ಕೊರೊನಾ ಸೋಂಕು ಹರಡದಂತೆ ಮತ್ತು ಜನರ ಅನಾವಶ್ಯಕವಾಗಿ ರಸ್ತೆಗೆ ಇಳಿಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುತ್ತಿರುವ, ಪೊಲೀಸ್ ಹಾಗೂ ಕೆಎಸ್ ಆರ್ ಪಿ ಸಿಬ್ಬಂದಿಗೆ ವೈದ್ಯರಿಂದ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಥಣಿ ತಾಲೂಕ IMA ಅಧ್ಯಕ್ಷ ಡಾ.ಅವಿನಾಶ್ ನಾಯಕ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಮತ್ತು ಸುರಕ್ಷಿತ ವಿಧಾನಗಳನ್ನು ಹಾಗೂ ಕೊರೊನಾ ವೈರಸ್ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾಗಿ ವಿಸ್ತಾರವಾಗಿ ಮಾಹಿತಿ ನೀಡಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ಮತ್ತು ಜಮಖಂಡಿಯಲ್ಲಿ ಈಗಾಗಲೇ ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಹರಡಿದೆ, ಇದರಿಂದ ಯಾರು ಧೃತಿಗೆಡದೆ ಕಾರ್ಯ ನಿರ್ವಹಿಸಿ. ಕರ್ತವ್ಯದ ಸಮಯದಲ್ಲಿ ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿರಿ. ಹಾಗೂ ಭಯಪಡದೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.
ಈ ವೇಳೆ ಮಾತನಾಡಿದ ಅಥಣಿ ಸಿಪಿಐ ಶಂಕರಗೌಡ ಬಸನಗೌಡ ಸಧ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಆಂತರ ಪಾಲಿಸುವದರ ಜೊತೆಗೆ ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಮಾಸ್ಕ್ ಧರಿಸುವುದು, ಮೇಲಿಂದ ಮೇಲೆ ಕೈ ತೊಳೆಯುವುದು ಹಾಗೂ ಅನವಶ್ಯಕವಾಗಿ ಮುಖದ ಭಾಗಗಳನ್ನು ಮುಟ್ಟಬೇಡೆ. ಮತ್ತು ಯಾವುದೇ ಸಿಬ್ಬಂದಿ ಧೈರ್ಯ ಕಳೆದುಕೊಳ್ಳದಂತೆ ಕಾರ್ಯ ನಿರ್ವಹಿಸಿ ಎಂದು ಧೈರ್ಯ ಹೇಳಿದರು.