ಬೆಳಗಾವಿ: ಕೆಲಸಗಳ ಒತ್ತಡದಿಂದ ಪ್ರಚಾರಕ್ಕೆ ಬರಲಾಗಲಿಲ್ಲ. ಇವತ್ತಿನಿಂದ ಪ್ರಾಮಾಣಿಕವಾಗಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳಾ ಅಂಗಡಿ ಅವರನ್ನು ಗೆಲ್ಲಿಸಿಕೊಂಡು ಬರಲಿದ್ದೇವೆ: ಬಾಲಚಂದ್ರ ಜಾರಕಿಹೊಳಿ ವಿಶ್ವಾಸ - ಗೋಕಾಕ್ನಲ್ಲಿ ಪ್ರಹ್ಲಾದ್ ಜೋಶಿ
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳೂ ಅಬ್ಬರದ ಪ್ರಚಾರ ಕೈಗೊಂಡಿವೆ. ಈ ನಡುವೆ ಇಂದಿನಿಂದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೇರೆ ಕೆಲಸಗಳ ಒತ್ತಡ ಇರೋದ್ರಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇವತ್ತಿನಿಂದ ಬೆಳಗಾವಿ ಲೋಕಸಭಾ ಅಭ್ಯರ್ಥಿ ಮಂಗಳಾ ಅಂಗಡಿ ಪರವಾಗಿ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಗೋಕಾಕ್ನಲ್ಲಿ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕಾರ್ಯಕರ್ತರು, ಪ್ರಮುಖ ಮುಖಂಡರ ಬೃಹತ್ ಸಭೆ ನಡೆಸಲಾಗುತ್ತಿದೆ ಎಂದರು.
ಸಹೋದರ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ನಾವು ಬಿಜೆಪಿಯ ಪರ ಇದ್ದೇವೆ. ಪಕ್ಷದ ಆದೇಶದಂತೆ ನಾವು ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಸಣ್ಣಪುಟ್ಟ ವ್ಯತ್ಯಾಸಗಳಿದ್ರೆ ಸರಿ ಮಾಡಿಕೊಂಡು ಕೆಲಸ ಮಾಡುತ್ತೇನೆ. ಕಳೆದ ಚುನಾವಣೆಯಂತೆಯೇ ಈ ಚುನಾವಣೆಯಲ್ಲಿಯೂ ಲೀಡ್ ಪಡುಯುತ್ತೇವೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಮಾಜಿ ಸಚಿವ, ಸಹೋದರ ರಮೇಶ್ ಜಾರಕಿಹೊಳಿಗೆ ಕೋವಿಡ್ ಇರುವುದರಿಂದ ಅವರು ಬರ್ತಾರೋ ಇಲ್ಲೋ ನೋಡಬೇಕು ಎಂದು ಬಾಲಚಂದ್ರ ಹೇಳಿದ್ರು.