ಅಥಣಿ :ಅನೇಕ ವರ್ಷಗಳಿಂದ ಉತ್ತರ ಕರ್ನಾಟಕ ಅಥಣಿ ಹಾಗೂ ಬಾಗಲಕೋಟೆ ಜಿಲ್ಲೆಯ ಗ್ರಾಮಗಳು ಕೃಷ್ಣಾನದಿ ನೆರೆ ಹಾವಳಿಗೆ ತತ್ತರಿಸಿ ಹೋಗಿದ್ದು, ಸರ್ಕಾರಗಳು ಈ ಭಾಗಕ್ಕೆ ಶಾಶ್ವತ ಪರಿಹಾರ ನೀಡದೆ ಸಂತ್ರಸ್ತರಿಗೆ ಅನ್ಯಾಯ ಮಾಡುತ್ತಿವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.
ಇಂದು ಸ್ವಾಮೀಜಿಗಳು ಅಥಣಿ ತಾಲೂಕಿನ ನೆರೆ ಸಂತ್ರಸ್ತ ಗ್ರಾಮಗಳಿಗೆ ಭೇಟಿ ನೀಡಿದರು. ಈ ವೇಳೆ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಆಳಿದ ಎಲ್ಲಾ ಸರ್ಕಾರಗಳು ಉತ್ತರ ಕರ್ನಾಟಕ ಎಂದರೆ ಅಲ್ಪತೃಪ್ತರು ಎಂದೇಳಿ ಪ್ರತಿ ಬಾರಿ ಮೂಗಿಗೆ ತಪ್ಪ ಹಚ್ಚುವ ಕೆಲಸ ಮಾಡುತ್ತಿವೆ. ಅದನ್ನು ಬಿಟ್ಟು ಸರ್ಕಾರ ನೆರೆ ಸಂತ್ರಸ್ತರ ಕಣ್ಣು ಒರೆಸುವ ಕೆಲಸ ಮಾಡಬೇಕು. ಈ ಭಾಗದ ಜನರಿಗೆ ಶಾಶ್ವತ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.