ಕರ್ನಾಟಕ

karnataka

ETV Bharat / state

ಬೆಳಗಾವಿ: 'ವೀರಶೈವ' ಬದಲು 'ಲಿಂಗಾಯತ ಜಾತಿ' ಪ್ರಮಾಣಪತ್ರ ವಿತರಿಸುವಂತೆ ಆಗ್ರಹ - Insist on Lingayat 'Caste Certificate

ಲಿಂಗಾಯತ ಜಾತಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದರೆ ವೀರಶೈವ ಲಿಂಗಾಯತ ಪ್ರಮಾಣಪತ್ರ ವಿತರಿಸುತ್ತಿದ್ದಾರೆ. ಇದರಿಂದ ನಮಗೆ ಮುಜುಗರ ಉಂಟಾಗುತ್ತಿದೆ ಎಂದು ಬೆಳಗಾವಿ ರಾಷ್ಟ್ರೀಯ ಬಸವದಳ ಪದಾಧಿಕಾರಿಗಳು ತಿಳಿಸಿದ್ದಾರೆ.

basavadal
ರಾಷ್ಟ್ರೀಯ ಬಸವದಳ

By

Published : Sep 15, 2020, 2:02 PM IST

ಬೆಳಗಾವಿ: ವೀರಶೈವ ಲಿಂಗಾಯತ ಬದಲು 'ಲಿಂಗಾಯತ' ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ ರಾಷ್ಟ್ರೀಯ ಬಸವದಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಬಸವದಳ
ಈ ವೇಳೆ ಜಿಲ್ಲಾಧಿಕಾರಿ ಕಚೇರಿಗಳಿಗೆ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಲಿಂಗಾಯತ ಜಾತಿ ಪ್ರಮಾಣ ಪತ್ರ ವಿತರಿಸುವಲ್ಲಿ ಲೋಪದೋಷಗಳು ಕಂಡು ಬರುತ್ತಿವೆ. ಲಿಂಗಾಯತ ಜಾತಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದರೆ ವೀರಶೈವ ಲಿಂಗಾಯತ ಪ್ರಮಾಣಪತ್ರ ವಿತರಿಸುತ್ತಿದ್ದಾರೆ. ಇದರಿಂದ ನಮಗೆ ಮುಜುಗರ ಉಂಟಾಗುತ್ತಿದೆ. ಈ ಹಿನ್ನೆಲೆ ವೀರಶೈವ ಬದಲು ಲಿಂಗಾಯತ ಪ್ರಮಾಣಪತ್ರವನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details