ಬೆಳಗಾವಿ:ಬಸವೇಶ್ವರ ಜಯಂತಿ ಅಂಗವಾಗಿ ಬೆಳಗಾವಿ ಜಿಲ್ಲಾಡಳಿತ ವತಿಯಿಂದ ನಗರದ ಗೋವಾವೇಸ್ನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಬಸವ ಜಯಂತಿ ಆಚರಣೆ: ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ ಸಚಿವ ಸುರೇಶ್ ಅಂಗಡಿ - belgavi latest news
ನಾಡಿನ ಸಮಸ್ತ ಜನರಿಗೆ ಕೆಂದ್ರ ಸಚಿವ ಸುರೇಶ್ ಕುಮಾರ್ ಅವರು ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿ ಇರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕರದಂಟು ನಾಡಲ್ಲಿ ಬಸವ ಜಯಂತಿ ಆಚರಣೆ
ನಂತರ ಮಾತನಾಡಿದ ಅವರು, ನಾಡಿನ ಸಮಸ್ತ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದರು. ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಅನಿಲ್ ಬೆನಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.