ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ನಲ್ಲಿ ಯಾಕಿಷ್ಟು ಅಸ್ಪಷ್ಟತೆ: ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ - ದ್ವಂದ್ವ ನೀತಿ

ಸತೀಶ್ ಜಾರಕಿಹೊಳಿ‌ ಹೇಳಿಕೆಯನ್ನು ಕಾಂಗ್ರೆಸ್​ನವರು ಹೇಗೆ ತೆಗೆದುಕೊಂಡು ಹೋಗ್ತಾರೆ ಅನ್ನೋದು ಮುಖ್ಯ. ಸತೀಶ್ ತಮ್ಮ ಹೇಳಿಕೆಯನ್ನ ಹಿಂದೆ ತೆಗೆದುಕೊಳ್ಳುವುದಿಲ್ಲ ಅಂತ ಹೇಳ್ತಿದ್ದಾರೆ. ಕಾಂಗ್ರೆಸ್​ನವರು ಇದನ್ನು ಒಪ್ಪುವುದಿಲ್ಲ ಅಂತಾ ಹೇಳ್ತಿದ್ದಾರೆ. ಕಾಂಗ್ರೆಸ್​ನಲ್ಲಿ ಯಾಕಿಷ್ಟು ಅಸ್ಪಷ್ಟತೆ ಇದೆ ಎಂದು ಬೊಮ್ಮಾಯಿ ಪ್ರಶ್ನೆ ಮಾಡಿದರು.

basavaraj bommai
ಬಸವರಾಜ ಬೊಮ್ಮಾಯಿ

By

Published : Nov 9, 2022, 2:32 PM IST

ಚಿಕ್ಕೋಡಿ: ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ ಅಂತಾ ಹೇಳ್ತಿದ್ದಾರೆ. ಸಿದ್ದರಾಮಯ್ಯ ಕೂಡ ನುಣುಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ ಯಾಕಿಷ್ಟು ಅಸ್ಪಷ್ಟತೆ ಅಂತಾ ಗೊತ್ತಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಯಬಾಗ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ‌ ಹೇಳಿಕೆಯನ್ನು ನಾವು ಹೇಗೆ ತೆಗೆದುಕೊಂಡು ಹೋಗ್ತೀವಿ ಎನ್ನುವುದಕ್ಕಿಂತ ಕಾಂಗ್ರೆಸ್​ನವರು ಇದನ್ನ ಹೇಗೆ ತೆಗೆದುಕೊಂಡು ಹೋಗ್ತಾರೆ ಅನ್ನೋದು ಮುಖ್ಯ. ಸತೀಶ್ ತಮ್ಮ ಹೇಳಿಕೆಯನ್ನ ಹಿಂದೆ ತೆಗೆದುಕೊಳ್ಳುವುದಿಲ್ಲ ಅಂತ ಹೇಳ್ತಿದ್ದಾರೆ. ಕಾಂಗ್ರೆಸ್​ನವರು ಒಪ್ಪುವುದಿಲ್ಲ ಅಂತಾ ಹೇಳ್ತಿದ್ದಾರೆ. ಕಾಂಗ್ರೆಸ್​ನಲ್ಲಿ ಯಾಕಿಷ್ಟು ಅಸ್ಪಷ್ಟತೆ ಇದೆ ಎಂದರು.

ರಾಯಬಾಗ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ

ಸತೀಶ್ ನೀಡಿರುವ ಹೇಳಿಕೆ ತಪ್ಪು ಎಂದು ಒಪ್ಪಿಕೊಳ್ಳದಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವೇ ಅವರ ಹೇಳಿಕೆಯನ್ನ ಒಪ್ಪಿಕೊಂಡಿದ್ದೇವೆ ಎಂದು ಹೇಳಬೇಕು. ಕಾಂಗ್ರೆಸ್ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು. ನೂರು ವರ್ಷಗಳ ಇತಿಹಾಸವಿರುವ ಪಕ್ಷ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಬರುವ ಹಾಗೆ ನಡೆದುಕೊಳ್ಳುತ್ತಿದೆ. ಭಾರತವನ್ನು ಗೊಂದಲದಲ್ಲಿಟ್ಟು ಆಳಬೇಕು ಎನ್ನುವ ಇವರ ಮೂಲ ಸಿದ್ಧಾಂತ ಮತ್ತೊಮ್ಮೆ ಪ್ರಕಟವಾಗಿದೆ. ರಾಹುಲ್ ದೇವಸ್ಥಾನಕ್ಕೆ ಹೋಗ್ತಾರೆ, ಇನ್ನೊಂದು ಕಡೆ ಈ ರೀತಿಯ ಹೇಳಿಕೆಗಳು ಬಂದಾಗ ಸುಮ್ಮನಿರ್ತಾರೆ. ಅವುಗಳಿಗೆ ಪರೋಕ್ಷವಾಗಿ ಬೆಂಬಲ ಮಾಡುತ್ತಾರೆ. ಈ ರೀತಿಯ ದ್ವಂದ್ವ ನೀತಿ ದೇಶಕ್ಕೆ ಹಾಗೂ ಕಾಂಗ್ರೆಸ್​ಗೆ ಸರಿಯಲ್ಲ ಎಂದರು.

ಇದನ್ನೂ ಓದಿ:ಸತೀಶ್ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ.. ಬಿ ಎಸ್ ಯಡಿಯೂರಪ್ಪ

ನನ್ನ ಹೇಳಿಕೆ ತಪ್ಪು ಎಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸತೀಶ್ ಹೇಳಿಕೆ ವಿಚಾರಕ್ಕೆ, ಯಾವ ಆಧಾರದ ಮೇಲೆ ಅವರು ಹೇಳಿದ್ದಾರೆ ಅನೋದನ್ನ ಸತೀಶ್ ಸ್ಪಷ್ಟಪಡಿಸಬೇಕು. ಯಾವುದಾದರೂ ಒಂದು ಗಟ್ಟಿ ಪುರಾವೆ ಬೇಕಲ್ವಾ?. ಇಂಟರ್​ನೆಟ್​ನಲ್ಲಿ ಹತ್ತು ಹಲವಾರು ವಿಚಾರಗಳು ಇರ್ತವೆ. ಸಾರ್ವಜನಿಕ ಜೀವನದಲ್ಲಿ ನಾವು ಅರಿವಿನಿಂದ ನಡೆಯಬೇಕು ಎಂದು ಹೇಳಿದರು.

ABOUT THE AUTHOR

...view details