ಬೆಳಗಾವಿ: ಕರಡಿ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ಘೋಶೆ (ಬಿಕೆ) ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಘೋಶೆ (ಬಿಕೆ) ಗ್ರಾಮದ ರೈತ ಭಿಕಾಜಿ ಈರಪ್ಪ ಮಿರಾಶಿ(63) ಎಂದು ಗುರುತಿಸಲಾಗಿದೆ.
ಶನಿವಾರ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ರೈತ ಭಿಕಾಜಿ ಮೇಲೆ ಕರಡಿ ದಾಳಿ ನಡೆಸಿತ್ತು. ಈ ವೇಳೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಕರಡಿಯನ್ನು ಓಡಿಸಲು ಯತ್ನಿಸಿದ್ದರು. ಆದರೆ, ಕರಡಿ ದಾಳಿಯನ್ನು ಮುಂದುವರೆಸಿ ರೈತನನ್ನು ಸುಮಾರು 2 ಕಿಮೀ ಕಾಡಿನೊಳಗೆ ಎಳೆದುಕೊಂಡು ಹೋಗಿದೆ. ಬಳಿಕ ಮೃತದೇಹ ಅರಣ್ಯ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.