ಬೆಳಗಾವಿ :ಕರಡಿಯೊಂದು ರೈತನ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಖಾನಾಪುರ ತಾಲೂಕಿನ ಚಿಕಳೆ ಗ್ರಾಮದಲ್ಲಿ ನಡೆದಿದೆ.
ಕರಡಿ ದಾಳಿ : ರೈತನ ಸ್ಥಿತಿ ಗಂಭೀರ - ಬೆಳಗಾವಿಯಲ್ಲಿ ರೈತನ ಮೇಲೆ ಕರಡಿ ದಾಳಿ
ರೈತನ ಮೇಲೆ ಕರಡಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ಚಿಕಳೆ ಗ್ರಾಮದಲ್ಲಿ ನಡೆದಿದೆ.
ರೈತನ ಮೇಲೆ ಕರಡಿ Bear attack on farmer in Belgavi ದಾಳಿ
ಶಂಕರ ಗೋವಿಂದ ಗವಸ್ (50) ಗಂಭೀರವಾಗಿ ಗಾಯಗೊಂಡ ರೈತ. ಹೊಲದಿಂದ ಮನೆಗೆ ತೆರಳುತ್ತಿದ್ದ ವೇಳೆ ಕರಡಿ ದಾಳಿ ಮಾಡಿ ಅಟ್ಟಹಾಸ ಮೆರೆದಿದೆ. ಕರಡಿ ದಾಳಿಯಿಂದ ರೈತ ಶಂಕರ್ ಗವಸ್ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.