ಬೆಳಗಾವಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಂದಿರುವ ಜೀವ ಬೆದರಿಕೆ ಹಿಂದೆ ಆರ್ಎಸ್ಎಸ್ ಕೈವಾಡ ಇದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಪಿ.ಸಿ. ಮೋಹನ್ ಗಂಭೀರ ಆರೋಪ ಮಾಡಿದ್ದಾರೆ.
ಖರ್ಗೆಗೆ ಬಂದಿರುವ ಜೀವಬೆದರಿಕೆ ಹಿಂದೆ ಆರ್ಎಸ್ಎಸ್ ಕೈವಾಡ: ಕೈ ಮುಖಂಡನ ಗಂಭೀರ ಆರೋಪ - ಕಾಂಗ್ರೆಸ್ ಗಂಭೀರ ಆರೋಪ
ರಾಜ್ಯದ ಬಿಜೆಪಿ ಸರ್ಕಾರವನ್ನು ಆರ್ಎಸ್ಎಸ್ ನಿಯಂತ್ರಿಸುತ್ತಿದೆ. ಈ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಂದಿರುವ ಜೀವ ಬೆದರಿಕೆಯನ್ನು ರಾಜ್ಯದ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ದೇಶದಲ್ಲಿ ಕೋಮುಗಲಭೆಗೆ ಆರ್ಎಸ್ಎಸ್ ಕಾರಣ. ದೇಶದಲ್ಲಿ ಶಾಂತಿ-ನೆಮ್ಮದಿ ಕದಡುವ ಕೆಲಸಕ್ಕೆ ಸಂಘದ ಕಾರ್ಯಕರ್ತರು ಮುಂದಾಗಿದ್ದಾರೆ ಕೆಪಿಸಿಸಿ ಕಾರ್ಯದರ್ಶಿ ಪಿ.ಸಿ. ಮೋಹನ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರವನ್ನು ಆರ್ಎಸ್ಎಸ್ ನಿಯಂತ್ರಿಸುತ್ತಿದೆ. ಈ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಂದಿರುವ ಜೀವ ಬೆದರಿಕೆಯನ್ನು ರಾಜ್ಯದ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ದೇಶದಲ್ಲಿ ಕೋಮುಗಲಭೆಗೆ ಆರ್ಎಸ್ಎಸ್ ಕಾರಣ. ಶಾಂತಿ-ನೆಮ್ಮದಿ ಕದಡುವ ಕೆಲಸಕ್ಕೆ ಸಂಘದ ಕಾರ್ಯಕರ್ತರು ಮುಂದಾಗಿದ್ದಾರೆ ಎಂದು ದೂರಿದರು.
ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಪ್ರತಿಪಕ್ಷ ನಾಯಕರಾಗಿದ್ದರು. ಆಗ ಕೇಂದ್ರ ಸರ್ಕಾರದ ಲೋಪಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದರು. ಇದೀಗ ಖರ್ಗೆ ಅವರು ರಾಜ್ಯಸಭೆ ಪ್ರವೇಶಿಸುತ್ತಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವರಿಗೆ ಜೀವಬೆದರಿಕೆ ಹಾಕಿ ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಖರ್ಗೆ ಅವರಿಗೆ ಬಂದಿರುವ ಜೀವಬೆದರಿಕೆ ಕರೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮೋಹನ್ ಆಗ್ರಹಿಸಿದರು.