ಬೆಳಗಾವಿ: ಕುಂದಾನಗರಿಯಲ್ಲೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಪಾಪಿ ತಂದೆಯೊಬ್ಬ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಮಗಳ ಮೇಲೆ ವಿಕೃತಿ ಮೆರೆದ ತಂದೆ ಖಾಸಗಿ ಆಸ್ಪತ್ರೆಯಲ್ಲಿ ಆರ್ಎಂಪಿ ವೈದ್ಯನಾಗಿ ಕೆಲಸ ಮಾಡುತ್ತಿದ್ದಾನೆ.
ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ.. ಬೆಳಗಾವಿಯಲ್ಲಿ ತಂದೆಯಿಂದಲೇ ಪೈಶಾಚಿಕ ಕೃತ್ಯ! - Belagavi father bit daughter news
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಮುಂದುವರೆದಿದೆ.
ಬೆಳಗಾವಿ
ಇತ್ತ ಖಾಸಗಿ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಮಗುವಿನ ತಾಯಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಕೆಲಸಕ್ಕೆ ತೆರಳಿದ ವೇಳೆ ಕುಡಿದ ನಶೆಯಲ್ಲಿ ತಂದೆ ಈ ವಿಕೃತಿ ಮೆರೆದಿದ್ದಾನೆ. ಸದ್ಯ ಆರೋಪಿ ತಂದೆಯನ್ನು ಕಾಕತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಮುಂದುವರೆದಿದೆ. ಇದಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಕೊಪ್ಪಳದಲ್ಲಿ ರೈಲಿಗೆ ಸಿಲುಕಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ