ಬೆಳಗಾವಿ: ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ನಡೆದ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕೊಲೆ ಪ್ರಕರಣದಲ್ಲಿ 7 ಜನರನ್ನು ಮತ್ತು ದೊಂಬಿ, ಗಲಾಟೆ ನಡೆಸಿದ್ದ 19 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಗುಂಪು ಸಂಘರ್ಷ ಪ್ರಕರಣ.. 26 ಆರೋಪಿಗಳು ಪೊಲೀಸ್ ವಶಕ್ಕೆ - ಬೆಳಗಾವಿಯಲ್ಲಿ ಸಾಮಾಜಿಕ ಕಾರ್ಯಕರ್ತನ ಕೊಲೆ
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಕಾರಣವಾದ 26 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದಲ್ಲಿ ಬಂದೋಬಸ್ತ್ ಮುಂದುವರೆಸಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ
ಗ್ರಾಮದಲ್ಲಿ ಬಂದೋಬಸ್ತ್ ಮುಂದುವರೆಸಿದ್ದು, ಪರಿಸ್ಥಿತಿ ಶಾಂತವಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ದೊಂಬಿ ಗಲಾಟೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದೆ. ಮೊದಲು ವಾಹನ ಪಾರ್ಕಿಂಗ್ ವಿಚಾರಕ್ಕೆ ಗಲಾಟೆಯಾಗಿದೆ. ಇದಕ್ಕೂ ಮೊದಲು ದೇವಸ್ಥಾನ ಜಾಗ ಒತ್ತುವರಿ ವಿಚಾರಕ್ಕೆ ವೈಷಮ್ಯವಿದ್ದ ಮಾಹಿತಿ ಇದೆ. ತನಿಖೆ ಬಳಿಕ ಆರೋಪಿಗಳ ವಿವರ ನೀಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಕೊಲೆ, ಹತ್ತಾರು ವಾಹನಗಳಿಗೆ ಬೆಂಕಿ