ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಭಾರಿ ಬಿರುಗಾಳಿ ಸಹಿತ ಮಳೆಗೆ ಬೃಹದಾಕಾರದ ಮರ ಧರೆಗುರುಳಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ 50ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಜಖಂಗೊಂಡಿವೆ.
ಜಿಲ್ಲಾಸ್ಪತ್ರೆ ಎದುರಿನ ರಸ್ತೆಯಲ್ಲೇ ಬೃಹತ್ ಮರ ಧರೆಗುರುಳಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವುಗೊಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.