ಕರ್ನಾಟಕ

karnataka

ETV Bharat / state

ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ವಾತಂತ್ರ್ಯ ದಿನ ಆಚರಣೆ.. ಎಂ ಜಿ ಹಿರೇಮಠ - ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಭೆ

ಕೋವಿಡ್-19 ಹಿನ್ನೆಲೆ ಈ ಬಾರಿ ಶಾಲಾ,ಕಾಲೇಜುಗಳ ತಂಡಗಳು ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ವೈದ್ಯರು, ಆಶಾ ಕಾರ್ಯಕರ್ತೆಯರು ಮತ್ತಿತರೆ ಕೊರೊನಾ ವಾರಿಯರ್ಸ್ ಹಾಗೂ ಸೋಂಕಿನಿಂದ ಗುಣಮುಖರಾದ ಐವರನ್ನು ಸಮಾರಂಭದಲ್ಲಿ ಸತ್ಕರಿಸಲಾಗುವುದು..

DC meeting
DC meeting

By

Published : Aug 3, 2020, 3:48 PM IST

ಬೆಳಗಾವಿ: ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಅಚ್ಚುಕಟ್ಟಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ದಿನದಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭದಲ್ಲಿ ಭಾಗವಹಿಸಬೇಕು ಎಂದರು.

ಕೋವಿಡ್-19 ಹಿನ್ನೆಲೆ ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಾಗೂ ಶಾಲಾ,ಕಾಲೇಜುಗಳ ತಂಡಗಳು ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದ ಅವರು, ವೈದ್ಯರು, ಆಶಾ ಕಾರ್ಯಕರ್ತೆಯರು ಮತ್ತಿತರೆ ಕೊರೊನಾ ವಾರಿಯರ್ಸ್ ಹಾಗೂ ಕೋವಿಡ್-19 ಸೋಂಕಿನಿಂದ ಗುಣಮುಖರಾದ ಐದು ಜನರನ್ನು ಸಮಾರಂಭಕ್ಕೆ ಆಹ್ವಾನಿಸಿ, ಸತ್ಕರಿಸಲಾಗುವುದು ಎಂದರು.

ಪ್ಲಾಸ್ಟಿಕ್ ಧ್ವಜ ಮಾರಾಟ/ಬಳಕೆ ನಿಷೇಧ :ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ಧ್ವಜದ ಬಳಕೆ ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮುನ್ಯಾಳ ಇದ್ದರು.

ABOUT THE AUTHOR

...view details