ಬೆಳಗಾವಿ:ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ಫಾರ್ಮರ್ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ, ಲೈನ್ಮ್ಯಾನ್ ಸಾವಿಗೀಡಾಗಿರುವ ಘಟನೆ ಗುರುವಾರ ಸಂಜೆ ಜರುಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದ ಹತ್ತಿರ ವಿದ್ಯುತ್ ಟ್ರಾನ್ಸ್ಫಾರ್ಮರ್ (ಟಿ.ಸಿ) ದುರಸ್ತಿ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ.
ಬೆಳಗಾವಿ: ವಿದ್ಯುತ್ ಟಿಸಿ ದುರಸ್ತಿ ವೇಳೆ ಲೈನ್ ಮ್ಯಾನ್ ಸಾವು - ಬೆಳಗಾವಿಯಲ್ಲಿ ಲೈನ್ಮ್ಯಾನ್ ಸಾವು
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದ ಹತ್ತಿರ ಟಿಸಿ ದುರಸ್ತಿ ಮಾಡುವಾಗ ಲೈನ್ಮ್ಯಾನ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಡೆದಿದೆ.
ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ಫಾರ್ಮರ್ ಮೇಲೆಯೇ ಮೃತಪಟ್ಟಿದ್ದಾರೆ. ಎಲ್ಲವನ್ನೂ ಸರಿಯಾಗಿ ಚೆಕ್ ಮಾಡಿಕೊಂಡೆ ಅವರು ಕೆಲಸವನ್ನು ಶುರು ಮಾಡಿದ್ದರು. ಆದರೆ, ಏಕಾಏಕಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಮೃತ ನಿಂಗಪ್ಪನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಮತ್ತು ಕುಲಗೋಡ ಪೊಲೀಸ್ ಠಾಣಾ ಅಧಿಕಾಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಬೆಳಗಾವಿ: ಮಳೆಗೆ 2 ದಿನ ಶಾಲೆಗೆ ರಜೆ, ಮನೆ ಗೋಡೆ ಕುಸಿದು ಬಾಲಕ ಸಾವು