ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಟೆಂಪಲ್ ರನ್ ಆರಂಭಿಸಿದ್ದಾರೆ.
ಸೋನಾ ಮಾರುತಿ ದೇವಸ್ಥಾನಕ್ಕೆ ಅಂಗಡಿ ಕುಟುಂಬ ಭೇಟಿ ನಗರದ ಆರ್ಟಿಒ ವೃತ್ತದಲ್ಲಿರುವ ಪಂಚವಟಿ ಸೋನಾ ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಮಂಗಳಾ ಅವರಿಗೆ ಶಾಸಕ ಅನಿಲ್ ಬೆನಕೆ, ಪುತ್ರಿಯರಾದ ಸ್ಪೂರ್ತಿ, ಶ್ರದ್ಧಾ ಸಾಥ್ ನೀಡಿದರು.
ಬಳಿಕ ಶಿವಾಜಿ ಉದ್ಯಾನಕ್ಕೆ ಭೇಟಿ ನೀಡಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿದರು. ನಂತರ ಕಾಂಗ್ರೆಸ್ ರಸ್ತೆಯ ಸಾಯಿಬಾಬಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಸಿಎಂ, ಕಟೀಲ್ ಭಾಗಿ:ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾರ ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ಶಶಿಕಲಾ ಜೊಲ್ಲೆ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.