ಬೆಳಗಾವಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿದ್ದು, ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವ ಮುನ್ನವೇ ಕುಂದಾನಗರಿಯಲ್ಲಿ ಬೇಡಿಕೆಯೊಂದು ಶುರುವಾಗಿದೆ.
ಬಿಎಸ್ವೈ ಸುವರ್ಣಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿ.. ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹ.. - undefined
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಕೈಗೊಳ್ಳಲಿರುವ ಬಿ ಎಸ್ ಯಡಿಯೂರಪ್ಪನವರಿಗೆ ಕುಂದಾನಗರಿ ಜನತೆ ಅಹವಾಲು ಇಟ್ಟಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಬೇಕೆಂಬ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಬೇಕೆಂಬ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. 2006ರಲ್ಲಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಳಗಾವಿಯಲ್ಲಿ ಸುವರ್ಣ ಸೌಧ ಕಟ್ಟುವ ನಿರ್ಣಯ ಕೈಗೊಳ್ಳಲಾಗಿತ್ತು. ಇದರಂತೆ ಅದರ ಅಡಿಗಲ್ಲು ಸಮಾರಂಭವನ್ನೂ ಯಡಿಯೂರಪ್ಪನವರು ಮಾಡಿದ್ದರು.
ಈಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಕೈಗೊಳ್ಳಲಿರುವ ಬಿ ಎಸ್ ಯಡಿಯೂರಪ್ಪನವರಿಗೆ ಕುಂದಾನಗರಿ ಜನತೆ ಅಹವಾಲು ಇಟ್ಟಿದ್ದಾರೆ. ತಾವು ದಯಮಾಡಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರಮಾಣವಚನ ಸ್ವೀಕರಿಸುವ ಜೊತೆಗೆ ಬೆಳಗಾವಿಯನ್ನು ರಾಜ್ಯದ 2ನೇ ರಾಜ್ಯಧಾನಿಯನ್ನಾಗಿ ಘೋಷಣೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಲಾಗ್ತಿದೆ.