ಬೆಳಗಾವಿ:ಮಹಾರಾಷ್ಟ್ರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರ ನಿವಾಸಕ್ಕೆ ಪೊಲೀಸರು ತೆರಳಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಶಾಸಕ ಶ್ರೀಮಂತ ಪಾಟೀಲ್ ನಿವಾಸಕ್ಕೆ ದೌಡಾಯಿಸಿದ ಬೆಳಗಾವಿ ಪೊಲೀಸರು - undefined
ಮಹಾರಾಷ್ಟ್ರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಅವರ ನಿವಾಸಕ್ಕೆ ಬೆಳಗಾವಿ ಪೊಲೀಸರು ದೌಡಾಯಿಸಿದ್ದಾರೆ. ಶ್ರೀಮಂತ ಪಾಟೀಲ ಅವರನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮಾಡಿದ ಆರೋಪಕ್ಕೆ ಸ್ಪೀಕರ್ ಅವರು ಗೃಹ ಇಲಾಖೆಗೆ ಸೂಚನೆ ನೀಡಿದ್ದರಿಂದ ತನಿಖೆ ನಡೆಸಲು ಮಹಾರಾಷ್ಟ್ರಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈಗೆ ತೆರಳಿದ್ದ ಬೆಳಗಾವಿ ಪೊಲೀಸರು
ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರ ನಿರ್ದೇಶನದ ಮೇರೆಗೆ ಅಥಣಿ ಡಿವೈಎಸ್ಪಿ ಆರ್.ಎಂ. ಬಸರಗಿ ಹಾಗೂ ಅಥಣಿ ಸಿಪಿಐ ಶೇಖರಪ್ಪ ನೇತೃತ್ವದ ತಂಡ ಸಾಂಗ್ಲಿಗೆ ತೆರಳಿದೆ.
ಶ್ರೀಮಂತ ಪಾಟೀಲ್ ಆಸ್ಪತ್ರೆಗೆ ಹೋಗಿಲ್ಲ, ಕಿಡ್ನಾಪ್ ಮಾಡಿದ್ದಾರೆ ಎಂದು ಸದನದಲ್ಲಿ ಕಾಂಗ್ರೆಸ್ ಆರೋಪ ಮಾಡಿದ ಮೇರೆಗೆ ಈ ಬಗ್ಗೆ ತನಿಖೆ ನಡೆಸುವಂತೆ ಸ್ಪೀಕರ್ ಗೃಹ ಇಲಾಖೆಗೆ ಸೂಚನೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಸಾಂಗ್ಲಿಗೆ ಭೇಟಿ ನೀಡಿ ಶ್ರೀಮಂತ ಪಾಟೀಲ್ ಕುಟುಂಬ ಸದಸ್ಯರ ಜೊತೆಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
Last Updated : Jul 19, 2019, 12:12 AM IST