ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಧಾರಾಕಾರ ಮಳೆ: ಮನೆ ಕುಸಿದು ಮಹಿಳೆ ಸಾವು - ಈಟಿವಿ ಭಾರತ್ ಕನ್ನಡ

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರಿದೆ. ಧಾರಾಕಾರ ಮಳೆಗೆ ಮನೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ ಧಾರಾಕಾರ ಮಳೆ
ಬೆಳಗಾವಿಯಲ್ಲಿ ಧಾರಾಕಾರ ಮಳೆ

By

Published : Sep 11, 2022, 3:12 PM IST

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ಧಾರಾಕಾರ ಮಳೆ

ಮನೆ ಕುಸಿದು ಮಹಿಳೆ ಸಾವು: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ವಿವಿಧೆಡೆ ವರುಣನ ಆರ್ಭಟ ಜೋರಾಗಿಯೇ ಇತ್ತು. ಹೂಲಿಕಟ್ಟಿ ಗ್ರಾಮದಲ್ಲಿಯೂ ಸಹ ಮಳೆಯಿಂದ ಸಾಕಷ್ಟು ಹಾನಿ ಆಗಿದೆ. ಇಂದು ನಸುಕಿನಜಾವ 4 ಗಂಟೆ ಸುಮಾರಿಗೆ ಮಹಿಳೆಯ ಮನೆ ಕುಸಿದು ಬಿದ್ದಿತ್ತು. ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದರು.

ಬೆಳಗಾವಿಯಲ್ಲಿ ಧಾರಾಕಾರ ಮಳೆ

ತಕ್ಷಣವೇ ಸ್ಥಳೀಯರ ನೆರವು ಪಡೆದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗ್ರಾಮಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

(ಇದನ್ನೂ ಓದಿ: ಕೇರಳ: ನದಿಯಲ್ಲಿ ಸ್ನೇಕ್​​ ಬೋಟ್‌ ಮಗುಚಿ ಇಬ್ಬರು ಸಾವು- ವಿಡಿಯೋ)

ABOUT THE AUTHOR

...view details