ಬೆಳಗಾವಿ: ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭಾ ನದಿ ನೀರಿನ ಒಳಹರಿವು ಹೆಚ್ಚಾಗಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಪರಿಣಾಮ ನವಿಲುತೀರ್ಥ ಜಲಾಶಯದಿಂದ 26 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಸುನ್ನಾಳ ಗ್ರಾಮದ ಬಳಿಯ ರಾಮದುರ್ಗ- ಬೆಳಗಾವಿಯ ರಸ್ತೆ ಸಂಪರ್ಕ ಕಡಿತವಾಗಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ ಮಲಪ್ರಭೆ: ಬೆಳಗಾವಿ - ರಾಮದುರ್ಗ ಸಂಪರ್ಕ ಕಡಿತ
ಹಲವು ದಿನಗಳಿಂದ ಜಿಲ್ಲೆ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮಲಪ್ರಭಾ ನದಿ ಅಪಾಯದ ಮಟ್ಟವನ್ನೂ ಮೀರಿ ಹರಿಯುತ್ತಿದೆ. ಇದರಿಂದ ಬೆಳಗಾವಿ - ರಾಮದುರ್ಗ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತವಾಗಿದೆ.
ಕಳೆದ ಹಲವು ದಿನಗಳಿಂದ ಜಿಲ್ಲೆ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮಲಪ್ರಭಾ ನದಿ ಅಪಾಯಮಟ್ಟವನ್ನು ಮೀರಿ ಹರಿಯುತ್ತಿದೆ. ಹೀಗಾಗಿ ನವಿಲು ತೀರ್ಥ ಜಲಾಶಯದಿಂದ 26 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ನದಿ ಪಾತ್ರದ ರಾಮದುರ್ಗ ತಾಲೂಕಿನ 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.
ಇದಲ್ಲದೇ ಸುನ್ನಾಳ ಗ್ರಾಮದ ಬಳಿಯ ಬೆಳಗಾವಿ - ರಾಮದುರ್ಗ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತವಾಗಿದೆ. 30ಕ್ಕೂ ಹೆಚ್ಚು ಕಿಲೋಮೀಟರ್ ಕ್ರಮಿಸಿ ರಾಮದುರ್ಗ ಸೇರುವ ದುಃಸ್ಥಿತಿ ವಾಹನ ಸವಾರರಿಗೆ ಎದುರಾಗಿದ್ದು, ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ಇದಲ್ಲದೇ ರಸ್ತೆ ಪಕ್ಕದ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಕೃಷಿ ಭೂಮಿ ಕೂಡ ಜಲಾವೃತವಾಗಿದೆ.