ಕರ್ನಾಟಕ

karnataka

ETV Bharat / state

ಕುಂದಾನಗರಿಯಲ್ಲಿ ಕೊರೊನಾ ರಣಕೇಕೆ, ಸ್ಥಾಯಿ ಸಮಿತಿ‌ ಚುನಾವಣೆ ಮುಂದೂಡಿಕೆ - ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಹಾವಳಿ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಲಾಗಿದೆ.

k.v.rajendra
ಡಾ.ಕೆ.ವಿ.ರಾಜೇಂದ್ರ

By

Published : Jun 3, 2020, 11:35 AM IST

ಬೆಳಗಾವಿ:ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 51 ಕೊರೊನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ.

ಅಧಿಸೂಚನೆ

ವಿವಿಧ ಸ್ಥಾಯಿ ಸಮಿತಿಗಳ ಸದಸ್ಯತ್ವ ಸ್ಥಾನಕ್ಕೆ ಜೂನ್ 4ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 15 ಕಂಟೇನ್​ಮೆಂಟ್ ಝೋನ್​​ಗಳನ್ನು ಗುರುತಿಸಲಾಗಿದೆ.

ಇದರಿಂದಾಗಿ ಜೂನ್​ 4 ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details