ಬೆಳಗಾವಿ:ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ. ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.
ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.