ಬೆಳಗಾವಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದ ಖಾನಾಪುರ ಪಟ್ಟಣದ ಯುವಕನ ಕೊಲೆ ಪ್ರಕರಣದ ತನಿಖೆ ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ವರ್ಗಾವಣೆಗೊಂಡಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಪೊಲೀಸರು ಬೈಲಹೊಂಗಲ ಡಿವೈಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದಾರೆ. ಈಗಾಗಲೇ 30ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದೆ. ಸದ್ಯ 6 ಜನರನ್ನು ವಶಕ್ಕೆ ಪಡೆದು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೂಕ್ಷ್ಮ ಪ್ರಕರಣವಾದ ಕಾರಣ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ಬಲವಾದ ಸಾಕ್ಷ್ಯಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.