ಬೆಳಗಾವಿ : ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪ್ರತಿಭಟನೆ ವೇಳೆ ಪೊಲೀಸರಿಂದ ದೌರ್ಜನ್ಯ: ಎಬಿವಿಪಿ ಕಾರ್ಯಕರ್ತರ ಆರೋಪ - Police brutality
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ಪ್ರತಿಭಟನೆಗೆ ಅನುಮತಿ ಪಡೆದಿದಲ್ಲವೆಂದು ವಿದ್ಯಾರ್ಥಿಗಳ ಪ್ರತಿಭಟನೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಎಬಿವಿಪಿ ಕಾರ್ಯಕರ್ತರ ಬಂಧನ
ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಅನುಮತಿ ಪಡೆದಿಲ್ಲವೆಂದು ಹೇಳಿ ಒತ್ತಾಯ ಪೂರ್ವಕವಾಗಿ ಪೊಲೀಸ್ ವಾಹನಕ್ಕೆ ತುಂಬಿಸಲಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆದ್ದರಿಂದ ಎಬಿವಿಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಬೇಕು ಆಗ್ರಹಿಸಿದರು.
ಎಬಿವಿಪಿ ಕಾರ್ಯಕರ್ತರ ಬಂಧನ
ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು, ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆಯಿತು.