ಚಿಕ್ಕೋಡಿ:ಶಿವು ಉಪ್ಪಾರ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ಶಿವು ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ವಿವಿಧ ಮಠಾಧೀಶರು ಜು.8ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಕ್ರಮ ಬಣಗೆ ಹೇಳಿದರು.
ಶಿವು ಉಪ್ಪಾರ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ಬೆಳಗಾವಿ ಚಲೋ - undefined
ಪೋಷಕರ ದೂರಿನಂತೆ ಸಿಬಿಐ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜು.8ರಂದು ಬೆಳಗಾವಿ ಚಲೋ ಹಮ್ಮಿಕೊಂಡ ಶ್ರೀರಾಮ ಸೇನೆ
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಕ್ರಮ ಬಣಗೆ
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವು ಉಪ್ಪಾರ ಸಾವಿನ ಸುತ್ತ ಹಲವಾರು ಅನುಮಾನಗಳು ಮೂಡಿವೆ. ಸಾವಿನ ತನಿಖೆ ಕೈಗೊಳ್ಳುವಂತೆ ದೂರು ನೀಡಿ 2 ತಿಂಗಳು ಕಳೆದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಪೋಷಕರು ಸಿಬಿಐ ತನಿಖೆಗೆ ಒತ್ತಾಯಿಸಿ ದೂರು ನೀಡಿದ್ದಾರೆ. ಸರ್ಕಾರ ಮಾತ್ರ ಯಾವುದಕ್ಕೂ ಸ್ಪಂದಿಸಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ಶಿವು ಮೃತ ದೇಹ ಸಿಕ್ಕಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ. ಗೋಸಾಗಾಟ ಮಾಡುವವರೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.