ಬೆಳಗಾವಿ : ಸೆಪ್ಟೆಂಬರ್ 15ರಂದು ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದವರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಮತ್ತೆ ಬಸವರಾಜ್ ಗಿರಿಮಲ್ಲ ಆಜೂರ (32) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ - ಈಟಿವಿ ಭಾರತ್ ಕನ್ನಡ ನ್ಯೂಸ್
ತಿರುಪತಿಯ ತಿಮ್ಮಪ್ಪನ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ ಏಳಕ್ಕೇರಿದೆ.
Published : Sep 26, 2023, 5:04 PM IST
|Updated : Sep 26, 2023, 7:10 PM IST
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಆಜೂರ್ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಸ್ವ ಗ್ರಾಮಕ್ಕೆ ಆಗಮಿಸುವ ವೇಳೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿಯ ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಸ್ಥಳದಲ್ಲೇ ಐವರು ಮೃತರಪಟ್ಟಿದ್ದರು. 11 ಜನರಿಗೆ ತೀವ್ರ ಗಾಯಗಳಾಗಿದ್ದವು. ಬಳಿಕ ಗಾಯಾಳುಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಸ್ತೂರಿ ಶೇಖರ ಆಜೂರ (35) ಆ ದಿನದಂದೇ ಸಾವನ್ನಪ್ಪಿದ್ದರು.
ಇದನ್ನೂ ಓದಿ :ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು