ಅಥಣಿ: ಬಹು ನಿರೀಕ್ಷಿತ ಸ್ವದೇಶಿ ಕೊರೊನಾ ವ್ಯಾಕ್ಸಿನ್ ನೀಡುವುದಕ್ಕೆ ಇಂದು ಅಥಣಿ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಚಾಲನೆ ನೀಡಿದರು.
ಓದಿ: ಕೊಪ್ಪಳದಲ್ಲಿ ಮೊದಲನೆಯವರಾಗಿ ಲಸಿಕೆ ಪಡೆದ ಜಿಲ್ಲಾಸ್ಪತ್ರೆ ಸಿಬ್ಬಂದಿ ಬಸವರಾಜ್
ಅಥಣಿ: ಬಹು ನಿರೀಕ್ಷಿತ ಸ್ವದೇಶಿ ಕೊರೊನಾ ವ್ಯಾಕ್ಸಿನ್ ನೀಡುವುದಕ್ಕೆ ಇಂದು ಅಥಣಿ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಚಾಲನೆ ನೀಡಿದರು.
ಓದಿ: ಕೊಪ್ಪಳದಲ್ಲಿ ಮೊದಲನೆಯವರಾಗಿ ಲಸಿಕೆ ಪಡೆದ ಜಿಲ್ಲಾಸ್ಪತ್ರೆ ಸಿಬ್ಬಂದಿ ಬಸವರಾಜ್
ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂರು ಕೊರೊನಾ ವಾರಿಯರ್ಸ್ಗಳಿಗೆ ಲಸಿಕೆ ನೀಡಲಾಗುತ್ತಿದೆ. ಇದರಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಡಿ ದರ್ಜೆ ಕೊರೊನಾ ವಾರಿಯರ್ಸ್ಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ.
ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಒಂದು ಕೇಂದ್ರದಲ್ಲಿ 100 ಲಸಿಕೆ ನೀಡಲಾಗುತ್ತದೆ, ಅದರಲ್ಲೂ ಮೊದಲಿಗೆ ಡಿ ದರ್ಜೆ ಕೊರೊನಾ ವಾರಿಯರ್ಸ್ಗಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಹೇಳಿದರು.
ಅಥಣಿ ತಾಲೂಕು ವೈದ್ಯಾಧಿಕಾರಿ ಬಸವರಾಜ ಕಾಗೆ ಮಾತನಾಡಿ, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ, ಇಂದು ಅಥಣಿ ಪಟ್ಟಣದಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದರು.