ಕರ್ನಾಟಕ

karnataka

ETV Bharat / state

ಪರಿಷತ್ ‌ಚುನಾವಣೆ ಘೋಷಣೆ ; ಶಸ್ತ್ರಾಸ್ತ್ರ ಒಪ್ಪಿಸಲು ಬೆಳಗಾವಿ ಡಿಸಿ ಸೂಚನೆ - ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959

ಚುನಾವಣೆಯ ಸಮಯದಲ್ಲಿ ಆಯುಧ ಲೈಸೆನ್ಸುದಾರರು(Weapons Licensors) ಆಯುಧಗಳೊಂದಿಗೆ ಓಡಾಡುವುದರಿಂದ ಶಾಂತಿಭಂಗ ಆಗಬಹುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್​ ಕುಮಾರ್​ ತಿಳಿಸಿದ್ದಾರೆ..

belgaum-dc
ಜಿಲ್ಲಾಧಿಕಾರಿ ಆರ್. ವೆಂಕಟೇಶ್​ ಕುಮಾರ್

By

Published : Nov 17, 2021, 10:43 PM IST

ಬೆಳಗಾವಿ :ವಿಧಾನಪರಿಷತ್ ಚುನಾವಣೆ ಡಿಸೆಂಬರ್ 10ರಂದು ನಡೆಯಲಿದೆ. ಡಿಸೆಂಬರ್ 16ರವರೆಗೆ ಸದಾಚಾರ ನೀತಿ ಸಂಹಿತೆ (Code of Conduct) ಜಾರಿಯಲ್ಲಿರುವ ಹಿನ್ನೆಲೆ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ (weapons surrender notice)ಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಜಮಾ ಮಾಡುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್​ ಕುಮಾರ್ (DC Venkatesh kumar)​ ಸೂಚನೆ ನೀಡಿದ್ದಾರೆ.

ಚುನಾವಣೆಯ ಸಮಯದಲ್ಲಿ ಆಯುಧ ಲೈಸೆನ್ಸುದಾರರು ಆಯುಧಗಳೊಂದಿಗೆ ಓಡಾಡುವುದರಿಂದ ಶಾಂತಿಭಂಗ ಆಗಬಹುದು ಅಥವಾ ಲೈಸೆನ್ಸುದಾರರು ಆಯುಧಗಳನ್ನು ದುರುಪಯೋಗ ಮಾಡುವ ಸಾಧ್ಯತೆಗಳಿರುತ್ತವೆ. ಚುನಾವಣೆಯ ಸಮಯದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಆದೇಶವನ್ನು ಹೊರಡಿಸಲಾಗಿದೆ.

ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕ್​ಗಳಿಗೆ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವ ಗಾರ್ಡ್​ಗಳು, ಖಾಸಗಿ ಗನ್‌ಮ್ಯಾನ್‌ಗಳು, ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿಯನ್ನು ಪಡೆದುಕೊಳ್ಳಬಹುದು. ಸದರಿ ಆದೇಶ ಉಲ್ಲಂಘಿಸಿದವರನ್ನು ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959ರಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಓದಿ:ಹೈಕೋರ್ಟ್ ತಳಮಹಡಿ ಕಚೇರಿ ಸ್ಥಳಾಂತರಕ್ಕೆ KGID ಕಟ್ಟಡ ನೀಡುವಂತೆ ಸರ್ಕಾರಕ್ಕೆ ಮನವಿ

ABOUT THE AUTHOR

...view details