ಕರ್ನಾಟಕ

karnataka

ETV Bharat / state

ಬೆಳಗಾವಿ: ಮಕ್ಕಳ ದತ್ತು ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ - District collector A.G. Hiremath

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಇಂದು ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಮಕ್ಕಳ ದತ್ತು ಕೇಂದ್ರಕ್ಕೆ ಭೇಟಿ ನೀಡಿದರು.

ಮಕ್ಕಳ ದತ್ತು ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ
ಮಕ್ಕಳ ದತ್ತು ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ

By

Published : Mar 16, 2021, 10:18 PM IST

ಬೆಳಗಾವಿ: ನಗರದ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಮಕ್ಕಳ ದತ್ತು ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಂಗಳವಾರ ಭೇಟಿ ನೀಡಿದರು.

ಮಕ್ಕಳ ದತ್ತು ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ

ಸಂಸ್ಥೆಯಲ್ಲಿರುವ ನಿರ್ಗತಿಕ ಮಕ್ಕಳ ಕುಟೀರ (ಹೆಣ್ಣು ಮತ್ತು ಗಂಡು), ಅನಾಥಾಶ್ರಮ, ಸ್ವದೇಶಿ ಮತ್ತು ವಿದೇಶಿ ದತ್ತು ಕೇಂದ್ರ ಹೀಗೆ ನಾಲ್ಕು ಮಕ್ಕಳ ಪಾಲನಾ ಸಂಸ್ಥೆಗಳನ್ನು ನಡೆಸುತ್ತಿದ್ದು, ಸದರಿ ಸಂಸ್ಥೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಂಸ್ಥೆಯಲ್ಲಿರುವ ಎಲ್ಲ ಮೂಲ ಸೌಕರ್ಯಗಳನ್ನು ವೀಕ್ಷಿಸಿ ಸಂಸ್ಥೆಯು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಓದಿ:ಬೆಳಗಾವಿ ಲೋಕಸಭಾ ಉಪಚುನಾವಣೆ ಘೋಷಣೆ: ನೀತಿ ಸಂಹಿತೆ ಪಾಲನೆಗೆ ಡಿಸಿ ಸೂಚನೆ

ದತ್ತು ಕೇಂದ್ರದ ಮಕ್ಕಳ ಜನ್ಮ ದಾಖಲಾತಿ, ಪೊಲೀಸ್ ಠಾಣೆಗಳಲ್ಲಿ ತಕ್ಷಣವೇ ಎಫ್​​ಐಆರ್ ಮಾಡುವಂತೆ ಮತ್ತು ಜಿಲ್ಲಾ ಆಸ್ಪತ್ರೆಯಿಂದ ಮಕ್ಕಳನ್ನು ಬೇಗ ಡಿಸ್ಚಾರ್ಜ್​ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಇದಲ್ಲದೇ ದತ್ತು ಕೇಂದ್ರದಲ್ಲಿರುವ ಮಕ್ಕಳ ಸಂಖ್ಯೆ ಹಾಗೂ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಕೇಳಿಕೊಂಡರು.

ABOUT THE AUTHOR

...view details