ಬೆಳಗಾವಿ:ಕೋವಿಡ್- 19 ಹಿನ್ನೆಲೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಗಿತವಾಗಿದ್ದ ಓಪಿಡಿ ಸೇವೆ ಪುನಃ ಆರಂಭಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕೊರೊನಾ ಇಳಿಮುಖ: ಓಪಿಡಿ ಸೇವೆಗೆ ಸಜ್ಜಾದ ಬೆಳಗಾವಿ ಜಿಲ್ಲಾಸ್ಪತ್ರೆ - Restart of the stalled OPD service
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆ ಓಪಿಡಿ ವಿಭಾಗವನ್ನು ಮತ್ತೆ ಆರಂಭಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದರಿಂದ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಓಪಿಡಿ ವಿಭಾಗವನ್ನು ಸ್ಥಗಿತಗೊಳಿಸಿ ಕೋವಿಡ್ ಸೆಂಟರ್ ಆಗಿ ಪರಿವರ್ತನೆ ಮಾಡಲಾಗಿತ್ತು. ಇದರಿಂದಾಗಿ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದಲ್ಲದೇ ನೂರಾರು ಬಡ ಜೀವಗಳು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದರು ಎಂಬ ಆರೋಪಗಳು ಕೂಡ ಇವೆ. ಆದರೀಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆ ಓಪಿಡಿ ವಿಭಾಗವನ್ನು ಮತ್ತೆ ಆರಂಭಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಜಿಲ್ಲಾಸ್ಪತ್ರೆಯ ಒಂದು ಬ್ಲಾಕ್‍ನಲ್ಲಿ ಕೋವಿಡ್ ಸೆಂಟರ್ ಮಾತ್ರ ಇಟ್ಟು ಉಳಿದೆಲ್ಲಾ ಕಟ್ಟಡಗಳಲ್ಲಿ ಓಪಿಡಿ ಸೇವೆಯನ್ನು ಆರಂಭಿಸಲು ಕ್ರಮ ಕೈಗೊಂಡಿದೆ. ಈ ಕುರಿತಂತೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿರುವ ಕಾರಣ ಜಿಲ್ಲಾಸ್ಪತ್ರೆಯಲ್ಲಿ ಓಪಿಡಿ ಸೇವೆಯನ್ನು ಆರಂಭಿಸಲು ಕ್ರಮಕೈಗೊಳ್ಳಲಾಗಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.