ಕರ್ನಾಟಕ

karnataka

By

Published : Sep 18, 2020, 11:00 PM IST

ETV Bharat / state

ಬೆಳಗಾವಿ ಜಿ.ಪಂ ಸಭೆ: ಅನುದಾನ ವಾಪಸ್ ಪಡೆಯಲು ಸರ್ವ ಪ್ರಯತ್ನ... ಸಿಇಓ ದರ್ಶನ್

ಲ್ಯಾಪ್ಸ್ ಆಗಿರುವ ಅನುದಾನದ ಬಗ್ಗೆ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ‌ಕೈಗೊಳ್ಳಲಾಗುವುದು ಎಂದು ಸಿಇಓ ದರ್ಶನ್ ತಿಳಿಸಿದರು.

Belgaum District Panchayat meeting
ಬೆಳಗಾವಿ ಜಿ.ಪಂಸಭೆ

ಬೆಳಗಾವಿ: ಲ್ಯಾಪ್ಸ್ ಆಗಿರುವ ಕಳೆದ ವರ್ಷದ ಜಿಲ್ಲಾ ಪಂಚಾಯತ ಅನುದಾನವನ್ನು ಮರಳಿ ಪಡೆಯುವ ಕುರಿತು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ ಸಿಇಓ ದರ್ಶನ.ಹೆಚ್.ವಿ. ತಿಳಿಸಿದರು.

ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯತ್​​ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಲ್ಯಾಪ್ಸ್ ಆಗಿರುವ ಅನುದಾನದ ಬಗ್ಗೆ ಈಗಾಗಲೇ ಮಾಹಿತಿಯನ್ನು ಪಡೆದುಕೊಂಡಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ‌ಕೈಗೊಳ್ಳಲಾಗುವುದು. ಲ್ಯಾಪ್ಸ್ ಆಗಿರುವ ಕಳೆದ ವರ್ಷದ ಅನುದಾನ ಮತ್ತೆ ಒದಗಿಸಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳಿಸಬಹುದು. ಅಂದಾಗ ಮಾತ್ರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು. ಅನುದಾನ ಲ್ಯಾಪ್ಸ್ ಆಗಿರುವುದಕ್ಕೆ ಸಂಬಂಧಿಸಿದಂತೆ ಖಜಾನೆ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಸಿಇಓ ದರ್ಶನ್ ತಿಳಿಸಿದರು.

ಅನುದಾನ ಲ್ಯಾಪ್ಸ್ : ತನಿಖೆಗೆ ಸಮಿತಿ ರಚನೆ:

ಅನುದಾನ ಲ್ಯಾಪ್ಸ್ ಆಗಿರುವ ಬಗ್ಗೆ ಸಮಗ್ರ ತನಿಖೆಯನ್ನು ನಡೆಸಲು ಉಪ ಕಾರ್ಯದರ್ಶಿಗಳ ನೇತೃತ್ವದ ಮೂರು ಅಧಿಕಾರಿಗಳ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಸಮಗ್ರ ಮಾಹಿತಿಯನ್ನು ಕಲೆಹಾಕುವುದರ ಜತೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಲಿದೆ. ಇದಾದ ಬಳಿಕ ಅಧಿಕಾರಿಗಳ ತಪ್ಪು ಕಂಡುಬಂದರೆ ನಿಯಮಾವಳಿ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಇಓ ತಿಳಿಸಿದರು.

ಬಹುತೇಕ ಇಲಾಖೆಯವರು ಮಾರ್ಚ್ ಅಂತ್ಯದೊಳಗೆ ಬಿಲ್​ಗಳನ್ನು ಖಜಾನೆಗೆ ಸಲ್ಲಿಸಲಾಗಿದ್ದು, ವಿಳಂಬವಾಗಿದ್ದರಿಂದ ಅನುದಾನ ಲ್ಯಾಪ್ಸ್ ಆಗಿರುತ್ತದೆ ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಸಭೆಗೆ ಮಾಹಿತಿಯನ್ನು ನೀಡಿದರು.

ABOUT THE AUTHOR

...view details