ಕರ್ನಾಟಕ

karnataka

ETV Bharat / state

ಬೆಳಗಾವಿಯ ಸೋಂಕಿತರ ವಿಡಿಯೋ ವೈರಲ್.. ಪ್ರಮುಖ ಆರೋಪಿಯ ಬಂಧನ

ಸಮಾಜಕ್ಕೆ ತಪ್ಪು ಸಂದೇಶ ಸಾರುವ ಉದ್ದೇಶದಿಂದ ಆರೋಪಿ ವಿಡಿಯೋ ವೈರಲ್ ಮಾಡಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿಸಿ ಸೂಚಿಸಿದ್ದರು.

main-accused-is-detention
ಪ್ರಮುಖ ಆರೋಪಿ ಬಂಧನ

By

Published : Apr 6, 2020, 3:40 PM IST

ಬೆಳಗಾವಿ :ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮೀರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇರಿಸಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು.

ಸಮಾಜಕ್ಕೆ ತಪ್ಪು ಸಂದೇಶ ಸಾರುವ ಉದ್ದೇಶದಿಂದ ಆರೋಪಿ ವಿಡಿಯೋ ವೈರಲ್ ಮಾಡಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿಸಿ ಸೂಚಿಸಿದ್ದರು. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಎಪಿಎಂಸಿ ಪೊಲೀಸರು ಆರೋಪಿಯನ್ನ ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 153(A), 188, 504, 505(1) ಸಹ ಕಲಂ 34ರ ಅಡಿ ಕೇಸ್ ದಾಖಲಿಸಿದ್ದಾರೆ.

ABOUT THE AUTHOR

...view details