ಕರ್ನಾಟಕ

karnataka

ETV Bharat / state

ಬೆಳಗಾವಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್‌ 30 ಕೊನೆ, ಏಪ್ರಿಲ್‌ 17ಕ್ಕೆ ಮತದಾನ - ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಏಪ್ರಿಲ್​ 17ಕ್ಕೆ ಓಟಿಂಗ್​

80 ವಯಸ್ಸಿನ ಮೇಲ್ಪಟ್ಟವರು, ವಿಕಲಚೇತನ ಮತದಾರರು, ಕೋವಿಡ್ ಸೋಂಕಿತರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಒಟ್ಟು 2566 ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ..

Belgaum Lok Sabha by-election
ಬೆಳಗಾವಿ ಲೋಕಸಭಾ ಉಪಚುನಾವಣೆ

By

Published : Mar 22, 2021, 4:49 PM IST

ಬೆಳಗಾವಿ: ನಾಳೆಯಿಂದ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಅವಕಾಶವಿರಲಿದೆ. ಮಾ.30ರಂದು ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆ

ನಗರದ ಡಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಏ.17ರಂದು ನಡೆಯುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ನಾಳೆಯೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಮಾ.31ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ.

ಏ.3ರಂದು ಉಮೇದುವಾರಿಕೆ ವಾಪಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಹೊರ ಬರಲಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಬೈಎಲೆಕ್ಷನ್‍ ವ್ಯಾಪ್ತಿಗೆ 9,08,103 ಪುರುಷ ಮತದಾರರು, 8,99,091 ಮಹಿಳಾ ಮತದಾರು, 22 ಇತರೆ ಮತದಾರರಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,07,250 ಮತದಾರಿದ್ದಾರೆ.

80 ವಯಸ್ಸಿನ ಮೇಲ್ಪಟ್ಟವರು, ವಿಕಲಚೇತನ ಮತದಾರರು, ಕೋವಿಡ್ ಸೋಂಕಿತರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಒಟ್ಟು 2566 ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ.

11,290 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ವಯ ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಜೊತೆಗೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು.

ABOUT THE AUTHOR

...view details