ಬೆಳಗಾವಿ: ಲೋಕಸಭೆ ಚುನಾವಣೆ ಸಿದ್ಧತೆಯ ಕುರಿತು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಎಸ್ ಬಿ ಬೊಮ್ಮನಹಳ್ಳಿ, ಉತ್ತರ ವಲಯ ಐಜಿಪಿ ಸುಹಾಸ್, ನಗರ ಪೊಲೀಸ್ ಆಯುಕ್ತ ಲೋಕೇಶ ಕುಮಾರ್, ಎಸ್ಪಿ ಸುದೀರಕುಮಾರ ರೆಡ್ಡಿ, ಜಿಪಂ ಸಿಇಓ ರಾಜೇಂದ್ರ ಅವರು ಸುದ್ದಿಗೋಷ್ಠಿ ನಡೆಸಿದರು.
ಬೆಳಗಾವಿ ಲೋಕಸಭೆ ಚುನಾವಣೆ ... 57 ಚೆಕ್ ಪೋಸ್ಟ್ 21 ಸಾವಿರ ಸಿಬ್ಬಂದಿ ನಿಯೋಜನೆ - ಜಿಲ್ಲಾಧಿಕಾರಿ ಡಾ. ಎಸ್ ಬಿ ಬೊಮ್ಮನಹಳ್ಳಿ
ಮುಂಬರುವ ಚುನಾವಣೆ ಮುಂಜಾಗೃತಕ್ರಮವಾಗಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನ ನೆಡೆಸಲಾಗಿತ್ತು.
ಬೆಳಗಾವಿ ಮೂರು ಲೋಕಸಭೆ ಕ್ಷೇತ್ರ ವ್ಯಾಪ್ತಿ ಹೊಂದಿದೆ. 18 ವಿಧಾನಸಭೆ ಕ್ಷೇತ್ರ ಪೈಕಿ ಬೆಳಗಾವಿ 8, ಚಿಕ್ಕೋಡಿ 8 ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬರುತ್ತವೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 17,49,005 ಮತದಾರರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 15,79,309 ಮತದಾರರು, ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ 3,93,720 ಮತದಾರರು ಇದ್ದಾರೆ. 17352 ಜನ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಇದ್ದಾರೆ. ರಾಜ್ಯದಲ್ಲಿ ಅತಿಹೆಚ್ಚು ಸೇವಾ ನೌಕರರು ಬೆಳಗಾವಿಯಲ್ಲಿ ಇದ್ದಾರೆ ಎಂದರು.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ- 2064, ಚಿಕ್ಕೋಡಿ ಕ್ಷೇತ್ರದಲ್ಲಿ- 1885, ಉತ್ತರ ಕನ್ನಡ ಕ್ಷೇತ್ರದಲ್ಲಿ 485 ಮತಗಟ್ಟೆ ಸ್ಥಾಪಿಸಲಾಗುವುದು. ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ 57 ಚೆಕ್ ಪೋಸ್ಟ್ ತೆರೆಯಲಾಗಿದೆ. ಚುನಾವಣೆಯಲ್ಲಿ 21 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.