ಬೆಂಗಳೂರು/ ಬೆಳಗಾವಿ: ವಿಧಾನಸಭೆಯ ಮೊಗಶಾಲೆಯಲ್ಲಿ ನಾಲ್ಕು ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು.
2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ.
- 2022ನೇ ಸಾಲಿನ ಕರ್ನಾಟಕ ಭೂಕಂದಾಯ ವಿಧೇಯಕ.(2ನೇ ತಿದ್ದುಪಡಿ)
- 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ.
- 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ ವಿಧೇಯಕಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ, ಮುರುಗೇಶ ನಿರಾಣಿ, ವಿ.ಸುನೀಲಕುಮಾರ್ ಅವರು ಮಂಡಿಸಿದರು. ನಂತರ ಅನುಮೋದನೆ ಪಡೆದುಕೊಳ್ಳಲಾಯಿತು.
ವಿಧೇಯಕಕ್ಕೆ ತಡೆ : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು 2021ನೇ ಸಾಲಿನ ಬಂಧಿಗಳ ಗುರುತಿಸುವಿಕೆ(ಕರ್ನಾಟಕ ತಿದ್ದುಪಡಿ) ವಿಧೇಯಕ ಹಿಂಪಡೆಯುವುದನ್ನು ಮಂಡಿಸಿರುವುದಕ್ಕೆ ವಿಧಾನಸಭೆ ತಾತ್ಕಾಲಿಕ ತಡೆ ನೀಡಿತು. ಈ ವಿಧೇಯಕ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಮತ್ತು ಸ್ಪಷ್ಟತೆ ಬರಬೇಕಾದ ಕಾರಣ ತಡೆಹಿಡಿಯಲಾಗುತ್ತಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನಕ್ಕೆ ತಿಳಿಸಿದರು.