ಬೆಳಗಾವಿ :ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿದರು.
ನೆರೆ ಪ್ರವಾಹಕ್ಕೆ ತುತ್ತಾಗಿ 11 ತಿಂಗಳು ಕಳೆದರೂ ಇದುವರೆಗೂ ಯಾರಿಗೂ ಪರಿಹಾರ ದೊರೆತ್ತಿಲ್ಲ. ಹೀಗಾಗಿ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ ಜೂ.18 ರಂದು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ, ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದವರು ಎಚ್ಚರಿಕೆ ನೀಡಿದ್ದಾರೆ.